ಬಳ್ಳಾರಿ: ರಾಜ್ಯ ಸರ್ಕಾರ 2015 ರಲ್ಲಿ ಹೊರಡಿಸಿದ ಆದೇಶವನ್ನು ಮುಂದಿಟ್ಟುಕೊಂಡು ಬಿಜೆಪಿ(BJP) ಬಳ್ಳಾರಿ ಪಾದಯಾತ್ರೆಯ(Ballari Padayatre) ಸಮಾರೋಪ ಸಮಾರಂಭಕ್ಕೆ ಅನುಮತಿ ನೀಡಲು ನಿರಾಕರಿಸಿದ್ದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಗರದಲ್ಲಿ ಸೆಪ್ಟೆಂಬರ್ 10ರಂದು ಆಯೋಜಿಸಲು
ಉದ್ದೇಶಿಸಲಾಗಿದ್ದ ಬಿಜೆಪಿಯ ಬೃಹತ್ ಬಹಿರಂಗ ಸಮಾವೇಶಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಎಕ್ಸ್ ಮುನ್ಸಿಪಲ್ ಶಾಲೆ) ಮೈದಾನವನ್ನು (Ground) ಬಳಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅನುಮತಿ ನಿರಾಕರಿಸಿದೆ. ಬಿಜೆಪಿ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಮೋಕಾ ಅವರು […]
