ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಸುರಕ್ಷತೆಗಾಗಿ ಕರ್ನಾಟಕ ಆರೋಗ್ಯ ಇಲಾಖೆಯು ಅನಧಿಕೃತ ಮತ್ತು ನಕಲಿ ಕ್ಲಿನಿಕ್‌ಗಳ ವಿರುದ್ಧ ಭಾರಿ ಕಾರ್ಯಾಚರಣೆ ನಡೆಸಿದೆ. 2024-26ರ ಅವಧಿಯಲ್ಲಿ 582 ಕ್ಲಿನಿಕ್‌ಗಳ ಮೇಲೆ ಕ್ರಮ ಜರುಗಿಸಿದ್ದು, 29 ನಕಲಿ ವೈದ್
ಯರ ವಿರುದ್ಧ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಕಲಬುರಗಿ ಮತ್ತು ರಾಯಚೂರಿನಲ್ಲಿ ಇವುಗಳ ಹಾವಳಿ ಹೆಚ್ಚಿದೆ. ಸಾರ್ವಜನಿಕರು ಚಿಕಿತ್ಸೆ ಪಡೆಯುವ ಮುನ್ನ ವೈದ್ಯರ ಅರ್ಹತೆ ಪರಿಶೀಲಿಸುವಂತೆ ಇಲಾಖೆ ಸೂಚಿಸಿದೆ.
