ರಾಜ್ಯದಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ವಿಜಯಪುರದಲ್ಲಿ ಪ್ರತಿ ಕೆಜಿಗೆ 60-70 ರೂಪಾಯಿ ತಲುಪಿದೆ. ಬರಗಾಲ ಮತ್ತು ಮಳೆ ಕೊರತೆಯಿಂದ ಈರುಳ್ಳಿ ಬಿತ್ತನೆ ಪ್ರದೇಶ ಕುಸಿದು ಇಳುವರಿ
ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದ ಜನಸಾಮಾನ್ಯರು, ವಿಶೇಷವಾಗಿ ಕೂಲಿಕಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ದಾವಣಗೆರೆಯಲ್ಲೂ ಉತ್ತಮ ಗುಣಮಟ್ಟದ ಈರುಳ್ಳಿಗೆ 58 ರೂಪಾಯಿ ದರ ಇದೆ.
