ಬೆಂಗಳೂರು,ಸೆ.1- ನಗರದಲ್ಲಿ ದಿನೇ ದಿನೇ ಟ್ರಾಫಿಕ್ ಸಮಸ್ಯೆ ಉಲ್ಬಣಿಸುತ್ತಿದ್ದು, ಸಾರ್ವಜನಿಕರಲ್ಲಿ ಸ್ವಯಂ ಶಿಸ್ತು ಮೂಡದೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅಸಾಧ್ಯ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟಿದ್ದಾರೆ. ನಗರದ ಸರ್ವಾಂಗೀಣ ಅಭಿವೃದ್ಧಿ ಕುರಿತು ಮಾಜಿ ಮಹಾಪೌರರಿಂದ ಸಲಹೆ-ಸೂಚನೆ ಪಡೆಯಲು ವಿಕಾಸಸೌಧದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ನಗರದ ಪ್ರಮುಖ ಸಮಸ್ಯೆಗಳಲ್ಲಿ ಟ್ರಾಫಿಕ್ ಸಮಸ್ಯೆ ಅಗ್ರಸ್ಥಾನದಲ್ಲಿದೆ. ಈಗಲೇ ಇದನ್ನು ನಿಯಂತ್ರಿಸದಿದ್ದರೆ ಮುಂದಿನ ದಿನಗಳಲ್ಲಿ ಪರಿಹಾರ ಕಂಡುಕೊಳ್ಳಲಾಗದಷ್ಟು ಗಂಭೀರವಾಗಲಿದೆ ಎಂದು ಎಚ್ಚರಿಸಿದರು. ಎಲ್ಲಾ ಸರ್ಕಾರಗಳು […] The post ಸಾರ್ವಜನಿಕರಲ್ಲಿ ಸ್ವಯಂ ಶಿಸ್ತು ಮೂಡದಿದ್ದರೆ ಸಮಸ್ಯೆ ಬಗೆಹರಿಯಲ್ಲ : KBG first appeared on Eesanje.
ಸಾರ್ವಜನಿಕರಲ್ಲಿ ಸ್ವಯಂ ಶಿಸ್ತು ಮೂಡದಿದ್ದರೆ ಸಮಸ್ಯೆ ಬಗೆಹರಿಯಲ್ಲ : KBG
By Dhallo News · September 1, 2026 at 4:29 PM IST
Have feedback on this article?Report error or suggestion
