ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಪೈಕಿ ಎರಡು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. 4ರಲ್ಲಿ ಈಗಾಗಲೇ ಎನ್ಡಿಎ (ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಎರಡರಲ್ಲಿ ಗೆದ್ದು ಬೀಗಿದ್ದುಮ ಇನ್ನುಳಿದ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರಿಂದ ಬ್ಯಾಲೆಟ್ ಪೇಪರ್ ಬಳಸಿದ್ರೂ ಸಹ ಆಡಳಿತಾರೂಢ ಕಾಂಗ್ರೆಸ್ಗೆ ಮುಖಭಂಗವಾಗಿದೆ. ಹೌದು.. ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಪೈಕಿ ಈಗಾಗಲೇ ಬೆಂಗಳೂರು ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಎರಡರಲ್ಲೂ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಬ್ಯಾಲೆಟ್ ಪೇಪರ್ ಬಳಸಿದ್ರೂ ಮುಗ್ಗರಿಸಿದ ಕಾಂಗ್ರೆಸ್: MLC ಚುನಾವಣೆಯಲ್ಲಿ ಮೇಲುಗೈ ಸಾಧಿಸಿದ ದೋಸ್ತಿಗಳು
ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಪೈಕಿ ಎರಡು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. 4ರಲ್ಲಿ ಈಗಾಗಲೇ ಎನ್ಡಿಎ (ಬಿಜೆಪಿ ಹಾಗೂ...
By Dhallo News · October 27, 2026 at 10:32 PM IST
Have feedback on this article?Report error or suggestion
